SharePoint

ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರದ ಅಧಿಕೃತ ಅಂತರ್ಜಾಲ

GOK > KCI > ಪರಿಚಯ
Last modified at 05/05/2017 15:54 by System Account

ಪರಿಚಯ

ಇ-ಆಡಳಿತ ಕೇಂದ್ರದ ಜಾಲತಾಣ ಪುಟಗಳಿಗೆ ಸ್ವಾಗತ.  ಕರ್ನಾಟಕ ಸರ್ಕಾರವು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು (ಐಸಿಟಿ) ಸದ್ಬಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಅನುಕರಣೀಯ ಮಾದರಿಯಾಗಿದ್ದು, ರಾಷ್ಟ್ರದಲ್ಲಿ ವಿದ್ಯುನ್ಮಾನ-ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಟಾನಗೊಳಿಸುವಲ್ಲಿ ಸಕ್ರಿಯವಾಗಿದೆ. ರಾಜ್ಯದ ಇ-ಆಡಳಿತ ನೀತಿ ಮತ್ತು ತಂತ್ರಗಾರಿಕೆಗಳ ಮಾರ್ಗಸೂಚಿಯಾಗಿ ಕಾರ್ಯನಿರ್ವಹಿಸಲು ಇ-ಆಡಳಿತ ಕೇಂದ್ರವನ್ನು ಸಂಘ-ಸಂಸ್ಥೆಗಳ ನೋಂದಾವಣೆ ಅಧಿನಿಯಮದ ಅಡಿಯಲ್ಲಿ 2006 ರಲ್ಲಿ ಒಂದು ನೋಡಲ್ ಸಂಸ್ಥೆಯಾಗಿ ಸೃಷ್ಟಿಸಲಾಗಿದೆ. ಇದು ರಾಜ್ಯದಲ್ಲಿ ಇ-ಆಡಳಿತ ಮೂಲಸೌಕರ್ಯಗಳ ಮತ್ತು ಮೂಲಭೂತ ಆಡಳಿತ ಸುಧಾರಣೆ ಆಧಾರಿತ ಅನ್ವಯಿಕಗಳನ್ನು ನಿರ್ವಹಿಸುವ ಪಾಲಕ ಸಂಸ್ಥೆಯಾಗಿದೆ. ವಸ್ತುತಃ ಈ ಸಂಸ್ಥೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ– (ಆಡಳಿತ ಸುಧಾರಣೆ – ಇ-ಆಡಳಿತ)) (ಡಿಪಿಎಆರ್- ಆಸು -ಇಆ) ಯ ಅಡಿಯಲ್ಲಿ ಸ್ಥಾಪಿತವಾಗಿದ್ದು, ಅದು ರಾಜ್ಯದ ಮುಖ್ಯಮಂತ್ರಿಗಳಿಗೇ ನೇರವಾಗಿ ಹೊಣೆಯಾಗಿರುವುದು ರಾಜ್ಯದಲ್ಲಿ ವಿಶೇಷವಾಗಿದೆ.

     ಪ್ರಸ್ತುತದಲ್ಲಿ, ಅತ್ಯಾಧುನಿಕ ಎರಡು ದತ್ತಾಂಶ ಕೇಂದ್ರಗಳು, ಎಂ.ಪಿ.ಎಲ್.ಎಸ್. ತಂತ್ರಜ್ಞಾನ ಆಧಾರಿತ ಕರ್ನಾಟಕ ರಾಜ್ಯ ವಿಸ್ತೃತ ಜಾಲ (/ಕೆಸ್ವಾನ್) ಮತ್ತು ಮೂಲ ಅನ್ವಯಿಕಗಳಾದ ಇ-ಸಂಗ್ರಹಣೆ ಮತ್ತು ಎಚ್.ಆರ್.ಎಂ.ಎಸ್. ಇವುಗಳನ್ನು ನಿರ್ವಹಿಸುವ ಹೆಗ್ಗಳಿಕೆಯ ಕೇಂದ್ರವಾಗಿದ್ದು, ಶತ ಪ್ರತಿಶತ ಕಾರ್ಯನಿರ್ವಹಣೆಯ ಗುಣಮಟ್ಟವನ್ನು ಕಾಯ್ದಿರಿಸಿಕೊಂಡು ಬರುತ್ತಾ, ಕೆಲವು ಹೆಗ್ಗುರುತನ್ನೂ ಮೂಡಿಸಿದೆ. 
                                                                                                          


pdf

pages


ceg department




ವಿನ್ಯಾಸ ಮತ್ತು ಅಭಿವೃದ್ಧಿ : ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ