ಮೂಲೊದ್ದೇಶ

​ಮೂಲೋದ್ದೇಶ


    ಸಾರಿಗೆ ಸಚಿವಾಲಯವು ಸಾರಿಗೆ ವಿಷಯ ಮಾರ್ಗಸೂಚಿಗಳಿಗೆ ಸಂಬಂಧಿಸಿದ ಸೂಚನೆ ಮುಂತಾದವುಗಳನ್ನು ಹೊರಡಿಸುತ್ತದೆ. ಸಾರ್ವಜನಿಕ ಉದ್ದೇಶವನ್ನು ಹೊಂದಿರುವ ಸರ್ಕಾರಿ ನೀತಿಗಳು, ಧ್ಯೇಯೋದ್ದೇಶಗಳನ್ನು ಸಾರಿಗೆ ಸಚಿವಾಲಯದ ಮೂಲಕ ನಿರ್ವಹಿಸಲಾಗುತ್ತದೆ ಮತ್ತು ಅವುಗಳನ್ನು ಸಾರಿಗೆ ಇಲಾಖೆಯ ಮೂಲಕ ಹಾಗೂ ಐದು ರಾಜ್ಯ ಸಾರಿಗೆ ಉದ್ದಿಮೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ.

    ಸಾರಿಗೆ ಇಲಾಖೆಯು ಅನುಷ್ಠಾನಗೊಳಿಸಬೇಕಾದ ಹೊಸ ಯೋಜನಾ ಕಾರ್ಯಕ್ರಮಗಳಿಗೆ ಸಾರಿಗೆ ಇಲಾಖೆಯಲ್ಲಿ ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದು ಅನುಷ್ಠಾನಗೊಳಿಸಲಾಗುವುದು.

    ಸಾರಿಗೆ ಸಚಿವಾಲಯದಲ್ಲಿನ ಪ್ರಕಾರ್ಯಗಳನ್ನು ಈ ಮುಂದಿನ ಅಧಿನಿಯಮಗಳು ಮತ್ತು ನಿಯಮಗಳಿಗೆ ಅನುಸಾರವಾಗಿ ಆಚರಣೆಗೆ ತರಲಾಗುತ್ತಿದೆ.:-

1)   ಕೇಂದ್ರ ಮೋಟಾರು ವಾಹನ ಅಧಿನಿಯಮ, 1988 ಮತ್ತು ನಿಯಮಗಳು

2)  ಕರ್ನಾಟಕ ಮೋಟಾರು ವಾಹನ ನಿಯಮಗಳು, 1989.

3)  ಕೇಂದ್ರ ಮೋಟಾರು ವಾಹನ ತೆರಿಗೆ ನಿರ್ಧರಣೆ, ಅಧಿನಿಯಮಗಳು, 1957.

4)  ರಸ್ತೆ ಸಾರಿಗೆ ನಿಗಮ ಅಧಿನಿಯಮ, 1950.

5)  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಗಳು, 1961.

ಸಾರಿಗೆ ಸಚಿವಾಲಯದ ಮೂಲಕ ಸರ್ಕಾರವು, ಮೇಲ್ಕಂಡ ಅಧಿನಿಯಮಗಳು ಮತ್ತು ನಿಯಮಗಳಲ್ಲಿರುವ ಚಲಾಯಿಸಬಹುದಾದ ಅಧಿಕಾರಗಳ ಪ್ರಕಾರ ಪ್ರಕಾರ್ಯಗಳನ್ನು ನಿರ್ವಹಿಸುತ್ತದೆ.

ಸಾರಿಗೆ ಆಯುಕ್ತರ ನಿಯೋಜಿತ ಅಧಿಕಾರಗಳನ್ನು ಚಲಾಯಿಸಲಿಕ್ಕಾಗದಿರುವಂತಹ ಮತ್ತು ಸಾರಿಗೆ ಆಯುಕ್ತರ ನಿಯೋಜಿತ ಅಧಿಕಾರಗಳನ್ನು ಮೀರಿರುವಂತಹ ಸಿಬ್ಬಂದಿಯವರ ಮತ್ತು ಅಧಿಕಾರಿಗಳ ಸೇವಾ ವಿಷಯಗಳಿಗೆ ಸಂಬಂಧಿಸಿದ ಕಾರ್ಯವನ್ನು ಸಾರಿಗೆ ಸಚಿವಾಲಯದಲ್ಲಿ ನಿರ್ವಹಿಸಲಾಗುತ್ತದೆ.

ರಾಜ್ಯ ಸಾರಿಗೆ ಉದ್ದಿಮೆಗಳ ಪ್ರಕಾರ್ಯಗಳನ್ನು ರಸ್ತೆ ಸಾರಿಗೆ ಅಧಿನಿಯಮ, 1950 ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಗಳು, 1961 ರ ಅಡಿಯಲ್ಲಿ ನಿರ್ವಹಿಸಲಾಗುತ್ತದೆ. ಹಾಗೂ ಹಣಕಾಸಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮತ್ತು ಸರ್ಕಾರವು ನಿರ್ವಹಿಸಬೇಕಾದ ಎಲ್ಲಾ ಪ್ರಕಾರ್ಯಗಳನ್ನು ರಸ್ತೆ ಸಾರಿಗೆ ನಿಗಮ ಅಧಿನಿಯಮ  1950 ರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಗಳು, 1961 ರ ಅನುಸಾರ ಸಾರಿಗೆ ಸಚಿವಾಲಯದಲ್ಲಿ ನಿರ್ವಹಿಸಲಾಗುತ್ತಿದೆ.

Last modified at 12/01/2018 13:13 by System Account