Last modified at 14/03/2019 11:12 by kmvstdcl

ಸಮೃದ್ಧಿ ಯೋಜನೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ /ಯುವತಿಯರನ್ನು ಉದ್ಯಮಶೀಲರನ್ನಾಗಿಸಲುಸಮೃದ್ಧಿ ಯೋಜನೆ ಅನುಷ್ಟಾನಗೊಳಿಸಲು ಉದ್ದೇಶಿಸಿದೆ. ಸದರಿ ಯೋಜನೆಯಡಿ ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು. ಸದರಿ ಯೋಜನೆಯಡಿ ವಿವಿಧ ಉದ್ದೇಶಗಳಡಿ ಯೋಜನೆಗಳನ್ನು ರೂಪಿಸಲಾಗಿದೆ.

ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಂಡ್ ಸಂಸ್ಥೆಗಳ ಸಹಯೋಗದಲ್ಲಿ ಪ್ರ್ರಾಂಚೈಸಿ/ಡೀಲರ್ಶೀಪ್ ವ್ಯವಸ್ಥೆಯೊಂದಿಗೆ ರಿಟೈಲ್ ವ್ಯಾಪಾರಿ ಮಳಿಗೆಗಳನ್ನು ಆರಂಭಿಸಲು ಅಗತ್ಯವಾದ ತಾಂತ್ರಿಕ ಬೆಂಬಲ ಹಾಗೂ ಆರ್ಥಿಕ ಬೆಂಬಲ ನೀಡಿ ಯಶಸ್ವಿ ಉದ್ದಿಮೆದಾರರನ್ನಾಗಿ ಮಾಡುವುದು. ಯೋಜನೆಯ ಉದ್ದೇಶವಾಗಿರುತ್ತದೆ. ಈಗಾಗಲೇ ಸರ್ಕಾರಿ ಮತ್ತು ಬ್ರಾಂಡೆಂಡ್ ಸಂಸ್ಥೆಗಳ ಜೊತೆ ಸರ್ಕಾರವು ಒಡಂಬಡಿಕೆ (ಎಂಓಯು) ಮಾಡಿಕೊಳ್ಳಲು ವ್ಯವಸ್ಥೆಯಾಗಿರುತ್ತದೆ. ಆಯ್ಕೆಯಾದ ಪ್ರತಿ ಫಲಾನುಭವಿಗೆ ಗರಿಷ್ಟ ರೂ.10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.


ಸಾಮಾನ್ಯ ಅರ್ಹತೆಗಳು:

1.            ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

2.            ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

3.            ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.

4.            ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.5,00,000/- ಮಿತಿಯೊಳಗಿರಬೇಕು.

5.            ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಹಿಂದೆ ನಿಗಮ/ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲಿ,                                  ಅಂತಹ  ಫಲಾನುಭವಿಗಳು ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

6.            ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

ಷರತ್ತುಗಳು:

1.            ಅರ್ಜಿದಾರರು ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗಬೇಕು.

2.            ಆಯ್ಕೆಯಾದ ಫಲಾನುಭವಿಯೂ ಬ್ರಾಂಡೆಡ್ ಸಂಸ್ಥೆಗಳು ನೀಡುವ ತರಬೇತಿ ಕಡ್ಡಾಯವಾಗಿ ಪಡೆದು ಅರ್ಹರಾಗಿರಬೇಕು.

3.            ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.

4.            ಘಟಕವನ್ನು ಆರಂಭಿಸಲು ಅವಶ್ಯವಿರುವ ಸ್ಥಳವನ್ನು ಹೊಂದಿರಬೇಕು.


​​​​​​​

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಆಭಿವೃದ್ಧಿ ನಿಗಮ ನಿಯಮಿತ(ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top