Last modified at 14/03/2019 12:27 by kmvstdcl

​​​​

ಐರಾವತ ಯೋಜನೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಪರಿಶಿಷ್ಟ ಪಂಗಡದ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರನ್ನಾಗಿ ಮಾಡಿಓಲಾ/”ಉಬರ್/”ಮೇರು ಸಂಸ್ಥೆಗಳ ಸಹಯೋಗದಲ್ಲಿ ಅತಿ ಹೆಚ್ಚು ಆದಾಯ ಪಡೆಯುವಐರಾವತ ಯೋಜನೆ ಅನುಷ್ಟಾನಗೊಳಿಸಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯ ಅಂತರಾಷ್ಟ್ರೀಯ ಮಟ್ಟದ ಪ್ರವಾಸಿಗರ ತಾಣವಾಗಿದ್ದು, ಯೋಜನೆಗೆ ಹೆಚ್ಚಿನ ಬೇಡಿಕೆ ಇರುತ್ತದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಯೋಜನೆಗೆ ಗರಿಷ್ಟ ರೂ.5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಟಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿಗೆಓಲಾ/”ಉಬರ್/”ಮೇರು ಸಂಸ್ಥೆಗಳೊಂದಿಗೆ ಟೈ-ಅಪ್ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೆ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಲಾಗಿದೆ.

ಸಾಮಾನ್ಯ ಅರ್ಹತೆಗಳು:

1.            ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

2.            ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

3.            ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.

4.            ಲಘುವಾಹನ  ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರಬೇಕು.

5.            ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.5,00,000/- ಮಿತಿಯೊಳಗಿರಬೇಕು.

6.            ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಹಿಂದೆ ನಿಗಮ/ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು                               ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಷರತ್ತುಗಳು:

1.            “ಓಲಾ/”ಉಬರ್/”ಮೇರು ಸಂಸ್ಥೆಗಳೊಂದಿಗೆ ಟೈ-ಅಪ್ ಮಾಡಿಕೊಂಡು ಸೌಲಭ್ಯ ಪಡೆಯಲು ಬದ್ಧರಿರಬೇಕು.

2.            ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಆಯ್ಕೆಯಾದ ಫಲಾನುಭವಿಯು ಓಲಾ /ಉಬರ್/ ಮೇರು ಸಂಸ್ಥೆಯಿಂದ ಟ್ಯಾಕ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸುವ                                ಬಗ್ಗೆ  ಜ್ಞಾನವನ್ನು ಪಡೆಯುವ ಕಾರ್ಯಕ್ರಮಕ್ಕೆ ಹಾಜರಾಗಬೇಕು

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಆಭಿವೃದ್ಧಿ ನಿಗಮ ನಿಯಮಿತ(ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top