ಮೂಲೊದ್ದೇಶ


0-6 ವರ್ಷದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬುನಾದಿ ಹಾಕುವುದಲ್ಲದೆ, ಪೂರಕ ಪೌಷ್ಟಿಕ ಆಹಾರ, ಅನೌಪಾಚಾರಿಕ ಶಾಲಾ ಪೂರ್ವ ಶಿಕ್ಷಣ, ಮಕ್ಕಳ ಆರೋಗ್ಯ ಹಾಗೂ ಪೌಷ್ಟಿಕತೆಯ ಬಗ್ಗೆ ತಾಯಂದಿರಿಗೆ ತರಬೇತಿ ಹಾಗೂ ಅರಿವು ಮೂಡಿಸುವುದರ ಬಗ್ಗೆ ಒತ್ತು ನೀಡುವುದು.

11-18 ವರ್ಷದ ಪ್ರಾಯ ಪೂರ್ವ ಬಾಲಕಿಯರ ಸಬಲೀಕರಣಕ್ಕಾಗಿ ಆರೋಗ್ಯ, ಪೌಷ್ಟಿಕತೆ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣ ನೀಡುವುದು.

ಪಾಲನೆ ಮತ್ತು ಪೋಷಣೆ ಅಗತ್ಯವಿರುವ ಹಾಗೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸುರಕ್ಷಿತವಾದ ವಾತಾವರಣವನ್ನು ಕಲ್ಪಿಸುವುದು.

ಬಾಲ್ಯ ವಿವಾಹವನ್ನು ತಡೆಗಟ್ಟಲು ಹಾಗೂ ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದು, ಹೆಣ್ಣು ಮಗುವಿನ ವಿರುದ್ದವಿರುವ ಪಕ್ಷಪಾತವನ್ನು ಹೋಗಲಾಡಿಸುವುದು, ಇಳಿಯುತ್ತಿರುವ ಲಿಂಗ ಪ್ರಮಾಣವನ್ನು ಸರಿಪಡಿಸಿವುದು ಹಾಗೂ ಸಾಮಾಜಿಕ ಪಿಡುಗುಗಳ ನಿರ್ಮೂಲನೆ.

ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡಗಟ್ಟುವುದು.

ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಬಲೀಕರಣ.

ಕೌಟುಂಬಿಕ/ಸಾಮಾಜಿಕ ಬೆಂಬಲವಿಲ್ಲದ, ಪ್ರತ್ಯೇಕ ಆದಾಯವಿಲ್ಲದ, ಖಂಡನೆಗಳಿಗೆ ಅವಕಾಶವಿರುವಂತಹ ಮಹಿಳೆಯರಿಗೆ ನೆರವು ಹಾಗೂ ಪುನರ್ವಸತಿ ಕಲ್ಪಿಸುವುದು.
ಮಹಿಳಾ ಉದ್ದೇಶಿತ ಆಯವ್ಯಯವನ್ನು ನಿಗದಿಪಡಿಸುವ ಮೂಲಕ ಮಹಿಳೆಯರ ಪರ ನೀತಿ/ಯೋಜನೆ/ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿ, ಲಿಂಗತ್ವ ಸಮಾನತೆಯನ್ನು ಪಡೆಯುವುದು.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣವನ್ನು ನಿಶ್ವಯಪಡಿಸುವುದು.

ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜಾಲದ ಮೂಲಕ ಮಹಿಳೆಯರನ್ನು ಹಾಗೂ ಮಕ್ಕಳನ್ನು ಬೆಂಬಲಿಸುವ ಸೇವೆಗಳನ್ನು ಒದಗಿಸುವುದು.

ದುಡಿಯುವ ಮಹಿಳೆಯರ ಮಕ್ಕಳಿಗಾಗಿ ರಾಜೀವಗಾಂಧಿ ಶಿಶುಪಾಲನಾ ಕೇಂದ್ರ ಯೋಜನೆಯ ಅನುಷ್ಟಾನ ಹಾಗೂ ತಿದ್ದುಪಡಿ.

ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಯೋಜನೆಗಳನ್ನು ಅನುಷ್ಟಾನಗೊಳಿಸುವುದು.

ಮಹಿಳಾ ಆಯೋಗದ ಮೂಲಕ ನ್ಯಾಯ ದೊರಕಿಸುವ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಹಿಳೆಯರನ್ನು ಸಬಲೀಕರಿಸುವುದು.

ಬಾಲವಿಕಾಸ ಅಕಾಡೆಮಿ ಹಾಗೂ ಬಾಲಭವನಗಳ ಮೂಲಕ ಮಕ್ಕಳಲ್ಲಿ ಹುದುಗಿರುವ ಸೃಜನಾತ್ಮಕ ಪ್ರತಿಭೆಯನ್ನು ಹೊರಹೊಮ್ಮಲು ಕ್ರಿಯಾತ್ಮಕ, ಸೃಜನಾತ್ಮಕ ಹಾಗೂ ಮನರಂಜನಾ ಕಾರ್ಯಕ್ರಮಗಳ ಅನುಷ್ಟಾನಗೊಳಿಸುವುದು.