ದೂರದೃಷ್ಟಿ (ವಿಷನ್)


ರಾಜ್ಯದ ಮಹಿಳೆಯರು ಶೈಕ್ಷಣಿಕ ಆರ್ಥಿಕ ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಬಲಿಷ್ಠರಾಗಕು ಮತ್ತು ರಾಜ್ಯದ ಮಕ್ಕಳ ಭವಿಷ್ಯವು ಬಾಲ್ಯಾವಸ್ಥೆಯಿಂದಲೇ ಆಶಾದಾಯಕವಾಗಿರಲು ಭದ್ರ ಬುನಾದಿ ಹಾಕುವುದಾಗಿದೆ.


ಘನೋದ್ದೇಶ (ಮಿಷನ್)


ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಬೇಕಾದ ಸಾಂಸ್ಥಿಕ ಮತ್ತು ಆರ್ಥಿಕ ನೆರವನ್ನು ಒದಗಿಸುವುದಾಗಿದೆ.

ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಪೌಷ್ಟಿಕತೆ ಹಾಗೂ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲು ಇತರೆ  ಸಹ ಇಲಾಖೆಗಳ ಸಹಯೋಗದೊಂದಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದಾಗಿದೆ.

ಮಹಿಳೆಯರಲ್ಲಿ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಸಲು ಶಿಕ್ಷಣ ಸಾಮಾಜಿಕ ಶಾಸನಗಳು, ಕೌಶಲ್ಯ ಅಭಿವೃದ್ಧಿ, ಸಾಮರ್ಥ್ಯ ಅಭಿವೃದ್ಧಿ ಹಾಗೂ ಆದಾಯೋತ್ಪನ್ನ ಚಟುವಟಿಕೆಗಳ ಬಗ್ಗೆ ಅರಿವನ್ನು ಮೂಡಿಸುವುದಾಗಿದೆ. ಈ ಮೂಲಕ ಮಹಿಳೆಯರನ್ನು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ಸಬಲೀಕರಣಗೊಳಿಸುವುದಾಗಿದೆ.

ಮಕ್ಕಳ ಶಿಕ್ಷಣ ಸಾಮಾಜಿಕ ಸಾಂಸ್ಕೃತಿಕವಾಗಿ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವುದು ಸೇರಿದಂತೆ ಅವರ ಹಕ್ಕುಗಳನ್ನು ಸಂರಕ್ಷಿಸಿ ಅವರು ಬದುಕುಳಿದು ಅಭಿವೃದ್ಧಿ ಹೊಂದಲು ಪೂರಕವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸುವುದಾಗಿದೆ.

ಮಹಿಳೆಯರು ಮತ್ತು ಮಕ್ಕಳು ಸಮಾಜದಲ್ಲಿ ನ್ಯಾಯಬದ್ದವಾಗಿ ಸಮಾನತೆಯನ್ನು ಹೊಂದಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ರೂಪಿಸಿರುವ ಕಾಯ್ದೆಗಳು ಮತ್ತು ಅಧಿನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ವಿವಿಧ ಶೋಷಣೆಗಳಿಂದ ರಕ್ಷಿಸಿ ಸಂಕಷ್ಟ ಪರಿಸ್ಥಿತಿಯಿಂದ ಹೊರತರುವುದಾಗಿದೆ.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಇರುವ ಕಾಯ್ದೆಗಳನ್ನು ಕಾರ್ಯನೀತಿಗಳನ್ನು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಹಾಗೂ ನಿರ್ದಿಷ್ಟ ಗುರಿಗಳನ್ನು ತಲುಪಲು ಸ್ವಯಂ ಸೇವಾ ಸಂಸ್ಥೆಗಳು, ಸರ್ಕಾರೇತರ ಹಾಗೂ ಕಾರ್ಪೋರೇಟ್ ವಲಯಗಳ ಭಾಗವಹಿಸುವುವಿಕೆಯನ್ನು ಉತ್ತೇಜಿಸುವುದಾಗಿದೆ.
ಕೆಲಸ ಕಾರ್ಯಗಳು
ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಹಾಗೂ ಮಕ್ಕಳ ರಕ್ಷಣೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಯ್ದೆ ಕಾನೂನು, ನೀತಿ, ಯೋಜನೆಗಳ ಹಾಗೂ ಕಾರ್ಯಕ್ರಮಗಳ ಚೌಕಟ್ಟಿನ ರಚನೆ ಹಾಗೂ ಅನುಷ್ಟಾನ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸಾರ್ವತ್ರೀಕರಣ, ಮೂಲ ಕರ್ಮಚಾರಿಗಳ ತರಬೇತಿ, ಪ್ರಾಯಪೂರ್ವ ಬಾಲಕಿಯರಿಗೆ ಪೌಷ್ಟಿಕಾಂಶ, ಕೌಶಲ್ಯ ಆಧಾರಿತ ಶಿಕ್ಷಣ ವೃತ್ತಪರ ತರಬೇತಿ, ಆರೋಗ್ಯ ಶಿಕ್ಷಣ ಹಾಗೂ ಗೃಹ ಆಧಾರಿತ ಚಟುವಟಿಕೆಗಳ ಬಗ್ಗೆ ಕೌಶಲ್ಯವನ್ನು ಒದಗಿಸುವುದು.

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಅನುಷ್ಟಾನ

ಕಾರ್ಯ ಕರ್ತೃತ್ವ ಹಾಗೂ ಮಹಿಳೆಯರ ಹಾಗೂ ಮಕ್ಕಳ ಸಾಗಣೆ ಬಗ್ಗೆ ಅರಿವು ಮೂಡಿಸಸುವುದು, ಸಾಗಣೆಗೆ ಒಳಪಟ್ಟು ಮಹಿಳೆಯರ ಹಾಗೂ ಮಕ್ಕಳಿಗಾಗಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ ಅಲ್ಲದೆ ಸಂಕಷ್ಟದಲ್ಲಿರುವ ಮಹಳೆಯರಿಗೆ ಅಲ್ಪಾವಧಿ ಗೃಹ/ಕೇಂದ್ರ ಹಾಗೂ ಸಾಂತ್ವನ ಕೇಂದ್ರಗಳ ಸ್ಥಾಪನೆ.

ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು.ವಿವಿಧ ಸಂಸ್ಥೆಗಳಲ್ಲಿ ಮಹಿಳಾ ಉದ್ದೇಶಿತ ಆಯವ್ಯಯವನ್ನು ನಿಗಧಿಪಡಿಸುವ ಪ್ರಕ್ರಿಯೆ ಬಗ್ಗೆ ಕಾರ್ಯ ಕರ್ತೃತ್ವ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ತರಬೇತಿ ನೀಡುವುದು.

ವಿವಿಧ ಇಲಾಖೆಗಳೊಂದಿಗೆ ಸಮನ್ವತೆಯ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯನ್ನು ಒಮ್ಮುಖವಾಗುವಂತೆ ನೋಡಿಕೊಳ್ಳುವುದು.

ಆಸ್ತಿ ಇಲ್ಲದ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸೂಕ್ಷ್ಮ ಜಮಾಕಟ್ಟು ನೆರವು ಪಡೆಯಲು ಅನುಕೂಲತೆಯನ್ನು ಕಲ್ಪಿಸುವುದು.

ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಉತ್ತೇಜಿಸುವುದು ಹಾಗೂ ಅನುಷ್ಟಾನಗೊಳಿಸುವುದು.